BIG NEWS | ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುವಾಗಲೇ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ.

ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!