BIG NEWS | ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹುಬ್ಬಳ್ಳಿ ನಗರದಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ನೀಡಿದ್ದ ಅನುಮತಿ ಪ್ರಶ್ನಿಸಿ, ಅಂಜುಮಾನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಆಕ್ಷೇಪಣೆಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ.

ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಅಂಜುಮಾನ್ ಇಸ್ಲಾಂ ಸಂಸ್ಥೆಯಿಂದ ಗಣೇಶೋತ್ಸವ ಅನುಮತಿಗಾಗಿ ರಚಿಸಿದ್ದಂತ ಸಮಿತಿಯ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಗಣೇಶೋತ್ಸವ ಕೂರಿಸವು ಬಗ್ಗೆ ನಿರ್ಧಿರಸೋ ಅಧಿಕಾರ ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಿಗೆ ಇದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.

ನಿನ್ನೆ ಹುಬ್ಬಳ್ಳಿ – ಧಾರವಾಡ ಪಾಲಿಕೆಯಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಮೂರು ದಿನಗಳಿಗೆ ಕೂರಿಸೋದಕ್ಕೆ ಅವಕಾಶ ನೀಡಲಾಗಿತ್ತು.
ಪಾಲಿಕೆಯಿಂದ ಅನುಮತಿಸಲಾಗಿದ್ದಂಗಣೇಶೋತ್ಸವದ ಬಗ್ಗೆ ಹುಬ್ಬಳ್ಳಿಯ ಅಂಜುಮಾನ್ ಇಸ್ಲಾಂ ಸಂಸ್ಥೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಈ ಕುರಿತಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ಪಾಲಿಕೆ ನಿರ್ಧಾರ ಸರಿಯಾಗಿದೆ ಎಂಬುದಾಗಿ ಅಭಿಪ್ರಾಯ ಪಟ್ಟು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!