ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅದಿಕಾರಕ್ಕೇರುವುದು ಬಹುತೇಕ ಖಚಿತವಾಗಿದ್ದು, ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಜೈರಾಮ್ ಠಾಕೂರ್ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಹಸ್ತಾತರಿಸಿದ ಸಿಎಂ ಜೈರಾಮ್ ಠಾಕೂರ್ ನಂತ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
‘ನಾನು ನನ್ನ ರಾಜೀನಾಮೆಯನ್ನ ರಾಜ್ಯಪಾಲರಿಗೆ ಹಸ್ತಾಂತರಿಸಿದ್ದೇನೆ. ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ನಾವು ವಿಷಯಗಳನ್ನ ವಿಶ್ಲೇಷಿಸಬೇಕಾಗಿದೆ. ಕೆಲವು ಸಮಸ್ಯೆಗಳು ಫಲಿತಾಂಶಗಳ ದಿಕ್ಕನ್ನು ಬದಲಾಯಿಸಿದವು. ಅವರು ನಮ್ಮನ್ನು ಕರೆದರೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದರು.