BIG NEWS | ಹಿಂದು ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದು ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ.

ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತ ಆರೋಪಿಗಳು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!