Monday, January 30, 2023

Latest Posts

BIG NEWS | ಭೀಕರ ರಸ್ತೆ ಅಪಘಾತ: ‘ನನ್ನಮ್ಮ ಸೂಪರ್ ಸ್ಟಾರ್’ ಖ್ಯಾತಿಯ ಮಗು ಸಮನ್ವಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಟಿಪ್ಪರ್ ಲಾರಿ- ದ್ವಿಚಕ್ರ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನ್ನಡ ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್ ಸ್ಟಾರ್ ‘ ಸ್ಪರ್ದಿ ಸಮನ್ವಿ (6) ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತಾಯಿಯೊಂದಿಗೆ ಸಮನ್ವಿ ತೆರಳುತ್ತಿದ್ದಾಗ ಅಪಫಾತ ಸಂಭವಿಸಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಮಗುವಿನ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಇನ್ನು ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!