Sunday, September 7, 2025

BIG NEWS | ದಕ್ಷಿಣ ಕೊರಿಯಾ ಮಣಿಸಿ ಏಷ್ಯಾ ಕಪ್ ಗೆದ್ದ ಭಾರತ ಹಾಕಿ ತಂಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2025 ರ ಹಾಕಿ ಏಷ್ಯಾ ಕಪ್ ಆವೃತ್ತಿಯಲ್ಲಿ ದಕ್ಷಿಣ ಕೊರಿಯಾವನ್ನು ಸೋಲಿಸುವ ಮೂಲಕ ಭಾರತ ಪುರುಷರ ಹಾಕಿ ತಂಡ ಭಾನುವಾರ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದು ಸಂಭ್ರಮಿಸಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ ಫೈನಲ್ ಮ್ಯಾಚ್ ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡವು ಆರಂಭದಿಂದಲೂ ಪ್ರಾಬಲ್ಯ ಸಾಧಿಸಿ, ಕೊರಿಯಾವನ್ನು 4-1 ಗೋಲುಗಳಿಂದ ಸೋಲಿಸುವ ಮೂಲಕ ಗೆಲುವು ಸಾಧಿಸಿದೆ.

ಈ ರೋಮಾಂಚಕಾರಿ ಗೆಲುವಿನಿಂದಾಗಿ, ಭಾರತವು ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿರುವ 2026 ರ ವಿಶ್ವಕಪ್‌ಗೆ ನೇರ ಅರ್ಹತೆಯನ್ನು ಗಳಿಸಿದೆ.

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಅಷ್ಟೇ ಅಲ್ಲ, ಈ ಪ್ರಶಸ್ತಿ ಗೆಲುವಿನೊಂದಿಗೆ, ಟೀಂ ಇಂಡಿಯಾ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿರುವ 2026 ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿದೆ.

ಇದನ್ನೂ ಓದಿ