BIG NEWS | ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಮೊದಲ ಲಿಥಿಯಂ ನಿಕ್ಷೇಪಗಳು ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಮೊದಲ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ.

ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ನಿಕ್ಷೇಪಗಳು ಪತ್ತೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್- ಹೈಮಾನ್ ಎಂಬಲ್ಲಿ 56 ಲಕ್ಷ ಟನ್‌ನಷ್ಟು ಲಿಥಿಯಂ ಕಂಡುಬಂದಿದೆ.

ಪ್ರಸ್ತುತ ಭಾರತ ಲಿಥಿಯಂ, ನಿಕಲ್ ಮತ್ತು ಕೋಬಾಲ್ಟ್‌ನಂತಹ ಖನಿಜಗಳನ್ನು ಆಮದು ಮಾಡಿಕೊಳ್ಳುತ್ತಿದೆ, ಇವಿ ಬ್ಯಾಟರಿಗಳ ತಯಾರಿಕೆಗೆ ಲಿಥಿಯಂ ಪ್ರಮುಖ ವಸ್ತುವಾಗಿದ್ದು, ಭಾರತದಲ್ಲಿಯೇ ಲಿಥಿಯಂ ನಿಕ್ಷೇಪ ಕಾಣಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಸೆಂಟ್ರಲ್ ಜಿಯೋಲಾಜಿಕಲ್ ಪ್ರೋಗ್ರಾಮಿಂಗ್ ಬೋರ್ಡ್‌ನ 62ನೇ ಸಭೆಯಲ್ಲಿ ಗಣಿ ಕಾರ್ಯದರ್ಶಿ ವಿವೇಕ್ ಭಾರಧ್ವಾಜ್ ಮಾತನಾಡಿದ್ದು, ದೇಶದ ಮೊದಲ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದಿದ್ದಾರೆ. ಲಿಥಿಯಂ, ನಿಕಲ್ ಹಾಗೂ ಕೋಬಾಲ್ಟ್ ಮೊಬೈಲ್ ಫೋನ್, ಸೌರ ಫಲಕಗಳು ಹಾಗೂ ಇತರ ಸಾಧನಗಳಲ್ಲಿ ಬಳಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!