ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, 2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.
ಬುಧವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು. ಮೈಸೂರು ದಸರಾ ಮಾದರಿಯಲ್ಲೇ ಹಂಪಿ, ಕಮಲಾಪುರ, ಹೊಸಪೇಟೆಯಲ್ಲಿ ದೀಪಾಲಂಕಾರ ಮಾಡುವ ಬಗ್ಗೆ ನಿರ್ಧರಿಸಲಾಗಿದ್ದು, ಸಾಂಸ್ಕೃತಿಕ ಸಂಜೆ, ಹಂಪಿ ಬೈ ಸ್ಕೈ, ಹೆಲಿಕಾಪ್ಟರ್ ರೈಡ್, ತುಂಗಾ ಆರತಿ, ಗ್ರಾಮೀಣ ಕ್ರೀಡೆಗಳ ಜೊತೆಗೆ ತುಂಗಭದ್ರಾ ನದಿಯಲ್ಲಿ ಜಲಕ್ರೀಡೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.