ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ರಾಜ್ಯದ ಇಂಡಲಗಾ ಜೈಲಿನಿಂದ ಬೆದರಿಕೆ ಕರೆ ಹೋದ ಬಳಿ, ಸರ್ಕಾರ ಎಚ್ಚೆತ್ತುಕೊಂಡಿದ್ದು, ಶೀಘ್ರ ಕಾರಾಗೃಹಗಳಲ್ಲಿ ಜಾಮರ್ ಅಳವಡಿಕೆಗೆ ಮುಂದಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯದ ಕೇಂದ್ರ ಕಾರಾಗೃಹಗಳಲ್ಲಿ ಜಾಮರ್ ಅಳವಡಿಸಲಾಗುತ್ತದೆ. ಶೀಘ್ರವೇ ಜಾಮರ್ ಅಳವಡಿಸಲು ಟೆಂಡರ್ ಕರೆಯಲಾಗುತ್ತದೆ ಎಂದರು.
ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಕಾರಾಗೃಹಗಳಿಂದ ಬೆದರಿಕೆ ಕರೆಗಳು ಹೋಗದಂತೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೇ ಜಾಮರ್ ಅಳವಡಿಕೆಗೆ ಟೆಂಡರ್ ಕರೆದು, ಅಳವಡಿಸುವಂತೆ ಸೂಚಿಸಲಾಗಿದೆ. ಈ ಮೂಲಕ ಇಂತಹ ಘಟನೆಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.