spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ಜೂ. 21ರ ಬಳಿಕ ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ: ಪ್ರಧಾನಿ ಮೋದಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ನಿಯಂತ್ರಣದಲ್ಲಿ ಲಸಿಕೆಯ ಪಾತ್ರ ಪ್ರಮುಖವಾದದ್ದು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ದೇಶದಲ್ಲಿ ಲಸಿಕೆ ಉತ್ಪಾದನೆ ಇನ್ನಷ್ಟು ವೇಗ ನೀಡಲಾಗುವುದು. 7 ಕಂಪನಿಗಳು ಉತ್ಪಾದಿಸುತ್ತಿದ್ದು, ಇನ್ನು ಮೂರು ಕಂಪನಿಗಳು ಪ್ರಯೋಗದ ಹಂತದಲ್ಲಿವೆ. ಎರಡು ಲಸಿಕೆಗಳ ಪ್ರಯೋಗ ಬಹಳ ವೇಗವಾಗಿ ನಡೆಯುತ್ತಿದೆ. ನೇಸಲ್ ವ್ಯಾಕ್ಸಿನ್ ಪ್ರಯೋಗವು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ ವಿತರಣೆ ಕುರಿತು ಒಂದಷ್ಟು ಟೀಕೆಗಳು ವ್ಯಕ್ತವಾದ್ದರಿಂದ ಲಸಿಕೆ ವಿತರಣೆಯ ಪೂರ್ತಿ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ಹೊರಲಿದ್ದು, ಇನ್ನೆರಡು ವಾರದಲ್ಲಿ ಆ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದರು.
ಸದ್ಯದಲ್ಲೇ ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿಯೇ ಲಸಿಕೆಯನ್ನು ನೀಡಲಿದೆ.\ಅಂತಾರಾಷ್ಟ್ರೀಯ ಯೋಗದಿನವಾದ ಜೂ. 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಬೇರೆ ವಯೋಮಾನದವರಿಗೆ ಈಗಾಗಲೇ ಲಸಿಕೆ ಉಚಿತವಾಗಿ ನೀಡಲಾಗುತ್ತಿದೆ.
ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಯಾವುದೇ ಭೇದಭಾವ ಪರಿಗಣಿಸದೆ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇನ್ನು ಉಚಿತವಾಗಿ ಲಸಿಕೆ ಪಡೆಯಲು ಇಚ್ಛೆ ಇರದವರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಸಿಗಲಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಬಾಬ್ತು 150 ರೂಪಾಯಿ ಸೇವಾಶುಲ್ಕ ಮಾತ್ರ ಪಡೆಯಬಹುದು ಪ್ರಧಾನಿ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss