BIG NEWS | ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಅಮಿತ್ ಶಾ ಜೊತೆ ಸಿಎಂಗಳ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಸಮಸ್ಯೆ ಇದೀಗ ಕೇಂದ್ರ ಸರಕಾರದ ಅಂಗಳ ತಲುಪಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಳಗಾವಿ ಗಡಿ ಸಮಸ್ಯೆ ಉಲ್ಬಣಿಸುತ್ತಿರುವ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಬುಲಾವ್ ನೀಡಿದ್ದರು. ಗಡಿ ಸಮಸ್ಯೆ ಬಗೆಹರಿಸಿ ಶಾಶ್ವತ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದರು.

ಇದರಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!