ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯ ಇನ್ಮುಂದೆ ‘ಕೇರಳಂ’ ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ.
ದೆಹಲಿಯ ನೂತನ ಪ್ರಧಾನ ಮಂತ್ರಿ ಕಾರ್ಯಾಲಯದ (PMO) ಕಟ್ಟಡ ‘ಸೇವಾತೀರ್ಥ’ದಲ್ಲಿ ನಡೆದ ಪ್ರಥಮ ಸಂಪುಟ ಸಭೆಯಲ್ಲೇ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ .
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2024ರಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಮಾಡಿದ್ದರು. ಬಳಿಕ ಕೇರಳ ವಿಧಾನಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿತ್ತು.
ಇದೀಗ ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಈ ಮಹತ್ವದ ಘೋಷಣೆ ಮಾಡಿರುವುದು ರಾಜಕೀಯವಾಗಿಯೂ ಕುತೂಹಲ ಮೂಡಿಸಿದೆ.



