BIG NEWS | 26/11 ರ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ ಶಿಕ್ಷೆ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

26/11 ರ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಜೊತೆಗೆ 3 ಲಕ್ಷ 40 ಸಾವಿರ ದಂಡವನ್ನೂ ವಿಧಿಸಿದೆ.
ಭಯೋತ್ಪಾದನೆಗೆ ಹಣ ನೀಡಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ ನ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
2020 ರಲ್ಲಿ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಫೀಜ್ ಸಯೀದ್‌ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಜಮಾತ್ ಉದ್ ದಾವಾ (JUD) ಮುಖ್ಯಸ್ಥ ಹಫೀಜ್ ಸಯೀದ್ ನನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ. ಇದೇ ವೇಳೆ ಆತನ ತಲೆಗೆ ಅಮೆರಿಕ 10 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡಿತ್ತು.
ಇನ್ನು ಹಫೀಜ್ ಸಯೀದ್ 2008 ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದು, ಈ ದಾಳಿ 161 ಜನರನ್ನು ಬಲಿತೆಗೆದುಕೊಂಡಿತ್ತು.
ಎಲ್‌ಇಟಿ ಸಹ ಸಂಸ್ಥಾಪಕ ಮತ್ತು ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸ್ಥಾಪಕ ಮೌಲಾನಾ ಮಸೂದ್ ಅಜರ್ ಮತ್ತು ಮುಂಬೈ ದಾಳಿಯ ಪ್ರಮುಖ ಅಪರಾಧಿ ಝಕಿ-ಉರ್-ರೆಹಮಾನ್ ಲಖ್ವಿ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!