BIG NEWS | ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ ಮೇಲೆ ಉಗ್ರರ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು,ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕಾಕಪೋರಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ರೈಲ್ವೇ ಪೊಲೀಸ್ ಪಡೆ ಸಿಬ್ಬಂದಿ ನಿಲ್ದಾಣದ ಹೊರಗಡೆ ಇರುವ ಟೀ ಸ್ಟಾಲ್​ನಲ್ಲಿ ಚಹಾ ಸೇವನೆ ಮಾಡ್ತಿದ್ದರು. ಈ ವೇಳೆ ಭಯೋತ್ಪಾದಕರಿಂದ ದಾಳಿ ನಡೆದಿದೆ. ಗಾಯಾಳುಗಳನ್ನು ಸುರಂದರ್ ಸಿಂಗ್ ಹಾಗು​​ ದೇವ್​​ರಾಜ್​ ಎಂದು ಗುರುತಿಸಲಾಗಿದೆ.
ಕೇಂದ್ರ ರೈಲ್ವೆ ಪೊಲೀಸ್ ಪಡೆಯ ಚೆಕ್‌ಪೋಸ್ಟ್‌ ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!