BIG NEWS | ರಷ್ಯಾದಿಂದ ಉಕ್ರೇನ್ ರಾಜಧಾನಿ ಕೈವ್ ಮೇಲೆ ಕ್ಷಿಪಣಿ ದಾಳಿ: 3 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಮತ್ತೆ ಉಕ್ರೇನ್ ರಾಜಧಾನಿ ಕೈವ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.

ಈ ಕುರಿತಂತೆ ವಿದೇಶಾಂಗ ವ್ಯವಹಾರಗಳ ಮೊದಲ ಉಪಮಂತ್ರಿ ಎಮಿನ್ ಡಿಜೆಪ್ಪರ್ ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ದು, ಉಕ್ರೇನಿಯನ್ ನಗರಗಳ ಮೇಲೆ ರಷ್ಯಾ ಭಯೋತ್ಪಾದಕರುಮತ್ತೊಂದು ಬೃಹತ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಗೆ ಮೂಲಸೌಕರ್ಯ ಸೌಲಭ್ಯಗಳು ಮತ್ತು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ. ಉಕ್ರೇನ್ ಅನೇಕ ನಗರಗಳು ವಿದ್ಯುತ್ ಇಲ್ಲದೆ ಪರದಾಡುತ್ತಿವೆ ಎಂದು ಡಿಜೆಪ್ಪರ್ ಟ್ವೀಟಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!