BIG NEWS | ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ನೇಮಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾಗಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿದ್ದಾರೆ.

ಬಳಿಕ ಮಾತನಾಡಿದ ಮೋದಿ, ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲು ಮನವಿ ಮಾಡಲಾಗಿದೆ. ಇನ್ನುಳಿದ ಮಾಹಿತಿಯನ್ನು ರಾಷ್ಟ್ರಪತಿ ಭವನ ನೀಡಲಿದೆ. ಸಾಮಾನ್ಯ ಜನರ ಕನಸು ಪೂರ್ತಿಗೊಳಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ. ಇನ್ನಷ್ಟು ವೇಗದೊಂದಿಗೆ ಕೆಲಸ ಮುಂದುವರಿಸೋಣ. 2014 ರಲ್ಲಿ ನಾನು ಹೊಸಬನಾಗಿದ್ದೆ. ಈಗ ನನಗೆ ಅನುಭವ ಸಿಕ್ಕಿದೆ, ಹೀಗಾಗಿ ಕೂಡಲೇ ಕೆಲಸ ಆರಂಭಿಸಲಿದ್ದೇವೆ. ಈ ಅನುಭವ ದೇಶದ ಸೇವೆಗೆ ಸಿಗಲಿದೆ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!