ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಜಕೀಯದಲ್ಲಿ ಎರಡು ಮೂರು ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಇರಲಿದೆ ಎಂದು ಹೇಳಿದ್ದಾರೆ.

ಇದೀಗ ಎಕ್ಸಿಟ್ ಪೋಲ್ ಬಗ್ಗೆ ರಾಜ್ಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಅತಂತ್ರದ ಬಗ್ಗೆ ತಂತ್ರಗಾರಿಕೆಯಲ್ಲಿ ರಾಜಕೀಯ ನಾಯಕರು ತೊಡಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ರಣತಂತ್ರ ರೂಪಿಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರ ಮಾಡಲ್ಲ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!