ಹೊಸದಿಗಂತ ಡಿಜಿಟಲ್ ಡೆಸ್ಕ್:
26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಬಂದಿಳಿದಿದ್ದು, ಆತನನ್ನು ಎನ್‌ಐಎ ಬಂಧಿಸಿದೆ.
ಪ್ರಾಥಮಿಕ ಔಪಚಾರಿಕತೆಯ ನಂತರ ಆತನನ್ನು ಎನ್‌ಐಎ ಪ್ರಧಾನ ಕಚೇರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ಉಗ್ರನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೂ ಹಾಜರುಪಡಿಸಲಾಗುವುದು.
2008ರ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ಅವರ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದ್ದರಿಂದ ಗಡೀಪಾರು ಮಾಡಲಾಗಿತ್ತು. ಇದಾದ ನಂತರ ಇಂದು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಯಿತು.