ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ.
ಪೊಲೀಸರು ಬಂಧಿಸೋದಕ್ಕೆ ತೆರಳಿದ ವೇಳೆಯಲ್ಲಿ ಬಿಹಾರ ಮೂಲದ ಆರೋಪಿ ರಿತೇಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಆರೋಪಿ ಬಲಿಯಾಗಿದ್ದಾನೆ.
ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಈ ಸಂದರ್ಭ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು.