ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಕರ್ ವಿಜೇತ, ಭಾರತ ಸಿನಿಮಾ ಸಂಗೀತ ಕ್ಷೇತ್ರದ ದಿಗ್ಗಜ ಎಆರ್ ರೆಹಮಾನ್ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಎಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಅವರಿಗೆ ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.