ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದಂತ ನೀಟ್-2021ರ ಪರೀಕ್ಷೆಗೆ ದಿನಾಂಕ ಘೋಷಣೆಯಾಗಿದ್ದು, ಸೆಪ್ಟೆಂಬರ್ 12ಕ್ಕೆ ಪರೀಕ್ಷೆಗೆ ದಿನಾಂಕವನ್ನು ನಿಗದಿ ಪಡಿಸಲಾಗಿದ್ದು, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, NEET(UG)-2021ರ ಪರೀಕ್ಷೆಯನ್ನು ಸೆಪ್ಟೆಂಬರ್ 12ರಂದು ನಡೆಸಲಾಗುತ್ತಿದೆ. ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಇಂತಹ ಪರೀಕ್ಷೆಗೆ ನಾಳೆ ಸಂಜೆ 5 ಗಂಟೆಯಿಂದ ಅರ್ಜಿ ಸಲ್ಲಿಕೆ NTA ವೆಬ್ ಸೈಟ್ ಮೂಲಕ ಆರಂಭಗೊಳ್ಳಲಿದೆ ಎಂಬುದಾಗಿ ತಿಳಿಸಿದ್ದಾರೆ.