BIG NEWS | ಪ್ರಜ್ವಲ್‌ ರೇವಣ್ಣ ಕೇಸ್ ನಲ್ಲಿ ಹೊಸ ತಿರುವು: ಮತ್ತೊಂದು ಆಡಿಯೋ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ವಕೀಲ ದೇವರಾಜೇಗೌಡ , ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!