ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮೂವರು ಶಂಕಿತ ಉಗ್ರರನ್ನು ಎನ್ ಐ ಎ ಬಂಧಿಸಿದೆ. ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.