ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಒಡಿಸ್ಸಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿರಿಯ ಸೆಕ್ಷನ್ ಎಂಜಿನಿಯರ್ ಅರುಣ್ ಕುಮಾರ್ ಮಹಾಂತ, ಮೊಹಮ್ಮದ್ ಅಮೀರ್ ಖಾನ್, ಸೆಕ್ಷನ್ ಎಂಜಿನಿಯರ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಸಿಬಿಐ ಬಂಧಿಸಿದೆ.
ಇನ್ನು ಈ ಘಟನೆಗೆ ಕಾರಣವಾದ ಕ್ರಮಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ವರದಿಯಲ್ಲಿ ಮಾನವ ಪ್ರಮಾದ ಮತ್ತು ನಿರ್ಲಕ್ಷವೇ ಕಾರಣ ಎಂದು ಹೇಳಿತ್ತು.