ರಾಹುಲ್ ಗಾಂಧಿ ಅವರೊಂದಿಗೆ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ನಾಳೆ ಮಹಿಳೆಯರಿಗೆ ಮಾತ್ರ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌  
ನಾಳೆ (ನವೆಂಬರ್ 19) ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನೋತ್ಸವ ಇರುವುದರಿಂದ  ಈ ದಿನ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ನವೆಂಬರ್ 7 ರಿಂದ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿದೆ.  ಪಾದಯಾತ್ರೆ ನಾಂದೇಡ್, ಹಿಂಗೋಲಿ ಮತ್ತು ವಾಶಿಮ್, ಅಕೋಲಾ ಮತ್ತು ಬುಲ್ಧಾನ ಜಿಲ್ಲೆಗಳನ್ನು ಸಾಗಿ ಹೋಗುತ್ತಿದ್ದು, ನವೆಂಬರ್ 20 ರಂದು ಮಧ್ಯಪ್ರದೇಶ ಪ್ರವೇಶಲಿದೆ.
ನವೆಂಬರ್ 19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನದವಾದ್ದರಿಂದ ಅಕೋಲಾ ಜಿಲ್ಲೆಯ ವಡೆಗಾಂವ್ ನಲ್ಲಿ ನಡೆಯುವ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಸಂವಹನ ಮತ್ತು ಪ್ರಚಾರ ವಿಭಾಗದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳ ಮಹಿಳಾ ಕಾರ್ಯಕರ್ತರು ನವೆಂಬರ್ 19 ರಂದು ಯಾತ್ರೆಯ ಎರಡೂ ಅಧಿವೇಶನಗಳಲ್ಲಿ (ಊಟದ ಪೂರ್ವ ಮತ್ತು ಊಟದ ನಂತರ) ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮತ್ತು ದೇಶದ ಇತರ ಭಾಗಗಳಿಂದ ಪಕ್ಷದ ಮಹಿಳಾ ಸಾರ್ವಜನಿಕ ಪ್ರತಿನಿಧಿಗಳು ಅಂದಿನ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!