Wednesday, September 10, 2025

BIG NEWS | ಆಪರೇಷನ್ ಮಹಾದೇವ್ ಕಾರ್ಯಾಚರಣೆ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀನಗರದಲ್ಲಿ ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.
ದಾಳಿಯ ಮಾಸ್ಟರ್​ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ.

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ.

ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ. ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಇದನ್ನೂ ಓದಿ