ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ.
ಇಂದು ಸುದೀರ್ಘ ಚರ್ಚೆ ಬಳಿಕ ಅವಿಶ್ವಾಸ ನಿರ್ಣಯವನ್ನು ಧ್ವನಿಮತಕ್ಕೆ ಹಾಕಲಾಗಿದ್ದು, ಇದರಲ್ಲಿ ವಿಪಕ್ಷಗಳ ನಿರ್ಣಯಕ್ಕೆ ಸೋಲುಂಟಾಗಿದೆ. ಹೀಗಾಗಿ, ಸ್ಪೀಕರ್ ಆಗಿ ಓಂ ಬಿರ್ಲಾ ಮುಂದುವರೆಯಲಿದ್ದು, ಗುರುವಾರ ಲೋಕಸಭೆ ಕಲಾಪಕ್ಕೆ ಹಾಜರಾಗಲಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ನಿರ್ಣಯದ ಕುರಿತು ಸದನದಲ್ಲಿ ದೊಡ್ಡ ಚರ್ಚೆ ನಡೆಯಿತು. ಚರ್ಚೆಯ ವೇಳೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ, ಘೋಷಣೆಗಳು ಮತ್ತು ಪ್ರತಿಭಟನೆಗಳು ನಡೆದವು. ಅಂತಿಮವಾಗಿ ಧ್ವನಿ ಮತದ ಮೂಲಕ ನಿರ್ಣಯಕ್ಕೆ ಸೋಲುಂಟಾಗಿದೆ.
ಮತದಾನದ ನಂತರ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಸದನವು ಮತ್ತೆ ಸಭೆ ಸೇರಲಿದೆ.



