ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಇದೀಗ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಎಲ್ಒಸಿಯಲ್ಲಿ ಗುಂಡಿನ ದಾಳಿ ನಡೆಸಿದೆ.
ಕದನ ವಿರಾಮ ಉಲ್ಲಂಘಿಸಿರುವ ಪಾಕ್ ಸೇನೆ ಪೂಂಚ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯೂ ಬಲವಾಗಿ ಪ್ರತಿದಾಳಿ ನಡೆಸಿದೆ.
ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ 15 ನಿಮಿಷಗಳ ಕಾಲ ಮುಂದುವರೆಯಿತು. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿದ ವರದಿಯಾಗಿಲ್ಲ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆಯಿಂದ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಲಾಗಿತ್ತು . ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸೇನೆಯು ಪ್ರತಿದಾಳಿ ನಡೆಸಿತು. ಈಗ ಗುಂಡಿನ ದಾಳಿ ನಿಂತಿದೆ. ಆದರೆ, ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರಬಹುದು ಎಂಬ ಮಾಹಿತಿ ಇರುವುದರಿಂದ ಎಲ್‌ಒಸಿಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.