ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಪ್ರವಾಸ ಮುಗಿಸಿ ಶನಿವಾರ ಸಂಜೆ ಕೈರೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಬರೋಬ್ಬರಿ 26 ವರ್ಷಗಳ ನಂತರ ಮೊದಲ ದ್ವಿಪಕ್ಷೀಯ ಭೇಟಿಗಾಗಿ ಪ್ರಧಾನಿ ಮೋದಿ ಈಜಿಪ್ಟ್ ಗೆ ಬಂದಿದ್ದಾರೆ.
ಎರಡು ದಿನಗಳ ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಈಜಿಪ್ಟ್ ಪ್ರಧಾನಿ ಮುಸ್ತಫಾ ಮಡ್ಬೌಲಿ ಅವರೊಂದಿಗೆ ದುಂಡುಮೇಜಿನ ಸಭೆ ನಡೆಸಲಿದ್ದಾರೆ ಮತ್ತು ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಅವರನ್ನು ಭೇಟಿ ಮಾಡಲಿದ್ದಾರೆ.