ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಆರಂಭದಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನ ನಿರಾಕರಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಅಂತಿಮವಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ರಾಹುಲ್ ಗಾಂಧಿಯವರನ್ನೇ ವಿಪಕ್ಷ ನಾಯಕನನ್ನಾಗಿ ಮಾಡಲು ನಿರ್ಧರಿಸಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ ವೇಣುಗೋಪಾಲ್ ಅವರು, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದಲೇ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತೆ ಆಯ್ತು ಎಂದರು.
ಇಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಾಬೇಕೆಂದು ಎಲ್ಲರೂ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೊರತಾಗಿ ಬೇರಾರೂ ನಾಯಕರಿಲ್ಲ ಅಂತ ನಿರ್ಣಯಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಲೋಕಸಭೆ ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಸೂಕ್ತ ಎಂಬುದಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಒಕ್ಕೊರಲ ಒಮ್ಮತವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಡಬ್ಲ್ಯೂ ಸಭೆಯಲ್ಲಿ ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ, ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದೆ ಎಂಬುದಾಗಿ ಹೇಳಿದರು.
2014ರಲ್ಲಿ ಮಲ್ಲಿಕಾರ್ಜುನ ಖರ್ಗೆ, 2019ರಲ್ಲಿಅಧೀರ್ ರಂಜನ್ ಚೌಧರಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು.