ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಐತಿಹಾಸಿಕ ಕ್ಷಣಕ್ಕೆ ದೇಶ, ವಿದೇಶದ ಗಣ್ಯರು ಸಾಕ್ಷಿಯಾದರು.ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸಿನಾ, ಮಾರಿಷಸ್ ಪ್ರಧಾನಿ, ಭೂತಾನ್ ಪ್ರಧಾನಿ ತ್ಸಷರಿಂಗ್ ತೊಬ್‌ಗೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.ಇನ್ನು ಬಾಲಿವುಡ್ ನಟ-ನಟಿಯರು, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಗಣ್ಯರು ಸೇರಿದ್ದರು.