spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರಿಗೆ ಸಲ್ಲಿಸಿದ್ದಾರೆ.
ಮಧ್ಯಾಹ್ನ 2 ಗಂಟೆಯ ನಂತರ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗ್ತಿದೆ.
ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.
ಕಳೆದ ಹಲವು ವರ್ಷಗಳಿಂದ ಪಂಜಾಬ್​ ಕಾಂಗ್ರೆಸ್​ನಲ್ಲಿ ಬಿರುಕು ಮೂಡಿದೆ. ಬಂಡಾಯ ಶಮನ ಮಾಡಲು ಹೈಕಮಾಂಡ್ ಎಷ್ಟೇ ಪ್ರಯತ್ನಿಸಿದರೂ, ಆಗುತ್ತಿಲ್ಲ. ಅಲ್ಲದೆ, ಅಂದಾಜು 40 ಕ್ಕೂ ಹೆಚ್ಚು ಶಾಸರು ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss