BIG NEWS | ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ರಾಜ್ಯ ಸರಕಾರದಿಂದ ಹೊಸ ಗೈಡ್ ಲೈನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಳದ ಕಾರಣ, ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ.
ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಜೊತೆಗೆ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಆದೇಶದಲ್ಲಿ ತಿಳಿಸಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿವೆ. ಹೀಗಾಗಿ ಈ ಕೆಳಗಿನ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.

ಮಾರ್ಗಸೂಚಿ ಕ್ರಮ
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ಮಾಸ್ಕ್ ಧರಿಸದೇ ಇದ್ದರೇ ಮಾರ್ಷಲ್, ಪೊಲೀಸ್ ಸಿಬ್ಬಂದಿಗಳು ದಂಡ ವಿಧಿಸಲು ಸೂಚನೆ
ಮುಚ್ಚಿದ ಕಫೆ ಟೀರಿಯಾ, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಪಬ್ ಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಜನರು, ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ.
ಸ್ವಂತ ವಾಹನಗಳು ಹಾಗು ಸಾರ್ವಜನಿಕ ಸಾರಿಗೆಗಳಲ್ಲಿ ( ಬಸ್ ಮತ್ತು ರೈಲು ) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ
ಐಎಲ್‌ಐ ಮತ್ತು ಸಾರಿ ಲಕ್ಷಣಗಳನ್ನು ಹೊಂದಿರುವವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರೋರು ಆದ್ಯತೆ ಮೇರೆಗೆ ಪರೀಕ್ಷೆ ಒಳಪಡಲು ಸೂಚನೆ
ಅರ್ಹ ಜನರೆಲ್ಲರೂ ಪ್ರಿಕಾಷನರಿ ಡೋಸ್ ಸೇರಿದಂತೆ, ಕೋವಿಡ್ ಲಸಿಕೆ ಪಡೆಯಲು ಸೂಚನೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!