ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಮಾಹಿತಿ ವರದಿಯಾಗಿದ್ದು, ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಶೆಳ್ಳಗಿ ಗ್ರಾಮದಿಂದ ಪಾಕಿಸ್ತಾನಕ್ಕೆ ಕರೆ ಹೋಗಿದೆ ಎಂದು ಶಂಕಿಸಲಾಗಿದೆ.
ಜಿಪಿಎಸ್ ಲೊಕೇಷನ್ ಆಧಾರದ ಮೇಲೆ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೀನಾ ನಿರ್ಮಿತ ಸ್ಯಾಟಲೈಟ್ ಫೋನ್ ನಿಂದ ಪಾಕಿಸ್ತಾನಕ್ಕೆ ಕರೆ ಹೋಗಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.