Saturday, October 1, 2022

Latest Posts

BIG NEWS | ಸೆ. 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ ನಡೆಸಲಿದ್ದಾರೆ.
ಮಂಗಳೂರು ಭೇಟಿಯ ವೇಳೆ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!