October 9, 2026
Friday, October 9, 2026
spot_img

BIG NEWS | ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಕರಾವಳಿಯ ಬಹುವರ್ಷದ ಬೇಡಿಕೆಗೆ ಸರ್ಕಾರದ ಮನ್ನಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು: ಕರಾವಳಿ ಭಾಗದ ಬಹುವರ್ಷಗಳ ಬೇಡಿಕೆಯಾಗಿದ್ದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಮಹತ್ವದ ನಿರ್ಣಯವನ್ನು ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಈ ಮೂಲಕ ತುಳು ಭಾಷೆಯ ಮಾನ್ಯತೆಗಾಗಿ ನಡೆಯುತ್ತಿದ್ದ ಸುದೀರ್ಘ ಹೋರಾಟಕ್ಕೆ ಮಹತ್ವದ ತಿರುವು ದೊರೆತಂತಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ವಿಶೇಷವಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಆದ್ಯತೆ ನೀಡುವ ಮೂಲಕ ಕರಾವಳಿಯ ಪ್ರವಾಸಿ ತಾಣಗಳ ಅಭಿವೃದ್ಧಿ, ಹೂಡಿಕೆ ಆಕರ್ಷಣೆ ಹಾಗೂ ಪ್ರವಾಸೋದ್ಯಮ ಮೂಲಸೌಕರ್ಯ ಬಲವರ್ಧನೆಗೆ ಒತ್ತು ನೀಡಲಾಗಿದೆ.

ಸಭೆಯ ಬಳಿಕ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಲು ನಿರ್ಣಯಿಸಲಾಗಿದೆ ಎಂದರು.

ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾದ ಮಹತ್ವದ ತೀರ್ಮಾನಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Must Read