ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಜಿರಿಬಾಮ್ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ 11 ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ.
ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್ ಯೋಧ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಬಿರದ ಮೇಲೆ ದಾಳಿ ಮಾಡಿದ ನಂತರ ಭಯೋತ್ಪಾದಕ ವಿರುದ್ಧ ಸಿಆರ್‌ಪಿಎಫ್ ಕಾರ್ಯಾಚರಣೆ ಕೈಗೊಂಡಿದ್ದರು.
ಮುಂಜಾನೆ ಮಣಿಪುರದ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾ ಉಪವಿಭಾಗದಲ್ಲಿರುವ ಹಲವಾರು ಅಂಗಡಿಗಳನ್ನು ಶಸ್ತ್ರಸಜ್ಜಿತ ಉಗ್ರಗಾಮಿಗಳು ಸುಟ್ಟುಹಾಕಿದ ನಂತರ ಈ ಬೆಳವಣಿಗೆಯಾಗಿದೆ.
ಉಗ್ರರು ಮಧ್ಯಾಹ್ನ 2.30 ರ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆಯ ಕಡೆಗೆ ಹಲವಾರು ಸುತ್ತು ಗುಂಡು ಹಾರಿಸಿದ್ದು, ಜಕುರಾದೋರ್ ಕರೋಂಗ್ ಕಡೆಗೆ ಸಾಗಿ ಬೆಂಕಿ ಹಚ್ಚುವಲ್ಲಿ ತೊಡಗಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಿಆರ್‌ಪಿಎಫ್‌ನ ಕಟ್ಟುನಿಟ್ಟಿನ ಕ್ರಮದಲ್ಲಿ 11 ಶಂಕಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಮೂಲಗಳ ಪ್ರಕಾರ, ಜಿರಿಬಾಮ್‌ನಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರಗಾಮಿಗಳು ಹತರಾಗಿದ್ದಾರೆ.