Monday, December 15, 2025

BIG NEWS |ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಇಂದು (ಡಿಸೆಂಬರ್ 14) ಸಂಜೆ 6.45ಕ್ಕೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಕಳೆದ ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ರಾಜಕೀಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿ ಕೂಡ ಅಪಾರ ಕೊಡುಗೆ ನೀಡಿದ್ದಾರೆ.

error: Content is protected !!