BIG NEWS | SSLC ಪರೀಕ್ಷೆಯ ‘ಅಂತಿಮ ವೇಳಾಪಟ್ಟಿ’ ಪ್ರಕಟ: ಮಾರ್ಚ್ 28ರಿಂದ ಶುರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೊರೋನಾ ಆತಂಕ ನಡುವೆಯೂ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಈ ಪ್ರಕಾರ ಮಾರ್ಜ್ 28ರಿಂದ ಪರೀಕ್ಷೆ ಆರಂಭಗೊಂಡು, ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ.

ಮಾರ್ಚ್, ಏಪ್ರಿಲ್ 2022ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 28ರಿಂದ ಆರಂಭಗೊಂಡು ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ:

ದಿನಾಂಕ 28-03-2022  (ಸೋಮವಾರ): ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಎನ್ ಸಿ ಇ ಆರ್ ಟಿ ), ಸಂಸ್ಕೃತ
30-03-2022 (ಬುಧವಾರ): ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
01-04-2022 (ಶುಕ್ರವಾರ): ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ
04-04-2022 (ಸೋಮವಾರ: ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
06-04-2022(ಬುಧವಾರ) : ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
08-04-2022 (ಶುಕ್ರವಾರ): ತೃತೀಯ ಭಾಷೆ – ಹಿಂದಿ ( NCERT ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
11-04-2022 (ಸೋಮವಾರ) ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.

ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ನೀಡಲಾಗುತ್ತೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!