ಹೊಸದಿಗಂತ ವರದಿ, ಮಂಡ್ಯ :
ಗಣಪತಿ ವಿಸರ್ಜನೆಗೆ ಮುನ್ನ ಪಟ್ಟಣದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ನಡೆದಿದೆ. ಘಟನೆಯಿಂದ ನಾಗಮಂಗಲ ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಕಲ್ಲು ತೂರಾಟ ನಡೆಸಿದ ಘಟನೆಯಿಂದ ಹಿಂದೂ-ಮುಸ್ಲೀಂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ, ಬಾಟಲಿಗಳನ್ನು ಎಸದೆ ಪರಿಣಾಮ 8 ಮಂದಿ ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದು, ಪೊಲೀಸ್ ಪೇದೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ನಡೆಸುತ್ತಿದ್ದಾರೆ.