BIG NEWS | ಆಂಧ್ರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕೋಚ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಜನವರಿ 19 ರಂದು ಪ್ರಧಾನಿ ಮೋದಿಯವರು ಈ ರೈಲಿನ ಉದ್ಘಾಟನೆ ಮಾಡಬೇಕಿತ್ತು. ಅದಾಗಲೇ ಕಲ್ಲು ತೂರಾಟ ನಡೆದಿದೆ.

ಈ ಕೃತ್ಯವೆಸಗಿದವರ ದುಷ್ಕರ್ಮಿಗಳನ್ನು ಹಿಡಿಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಟ್ರಯಲ್ ರನ್ ಮುಗಿದ ನಂತರ ವಂದೇ ಭಾರತ್ ರೈಲು ವಿಶಾಖಪಟ್ಟಣಂ ರೈಲು ನಿಲ್ದಾಣದಿಂದ ಮರ್ರಿಪಾಲೆಂನ ಕೋಚ್ ನಿರ್ವಹಣಾ ಕೇಂದ್ರಕ್ಕೆ ಹೋಗುತ್ತಿದ್ದಾಗ ನಿರ್ವಹಣಾ ಪ್ರಕ್ರಿಯೆಯಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಿಕಂದರಾಬಾದ್ ರೈಲು ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ರೈಲಿಗೆ ಫ್ಲ್ಯಾಗ್ ಆಫ್ ಮಾಡಲು ನಿರ್ಧರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!