BIG NEWS | ಮೇಕೆದಾಟು ಪಾದಯಾತ್ರೆ ಸ್ಥಗಿತಗೊಳಿಸಿ: ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ.

ಕಾಂಗ್ರೆಸ್‌ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಎಸ್ ಪಿಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ.

ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದ್ದು,. ಇಂದು ನಾಲ್ಕನೇ ದಿನದ ಪಾದಯಾತ್ರೆ ನಡೆಯುತ್ತಿತ್ತು. ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್ ವರೆಗೂ ಪಾದಯಾತ್ರೆ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!