ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ತುಬಾನ್‌ನಿಂದ ಉತ್ತರಕ್ಕೆ 96 ಕಿ.ಮೀ ದೂರದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 7.0 ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಆರಂಭದಲ್ಲಿ 6.0255 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 112.0332 ಡಿಗ್ರಿ ಪೂರ್ವ ರೇಖಾಂಶದಲ್ಲಿ ಪತ್ತೆಯಾಗಿದೆ.ಭೂಕಂಪದ ಆಳ 594.028 ಕಿ.ಮೀ. ಇದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.