ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅನಾರೋಗ್ಯ ಹಿನ್ನೆಲೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದ ಎಂ.ಕೆ.ಸ್ಟಾಲಿನ್ ಅವರನ್ನ ಕ್ರೀಮ್ಸ್ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎಂಡೋಸ್ಕೋಪಿ ಚಿಕಿತ್ಸೆ ನೀಡುತ್ತಿದ್ದು, ಚಿಕಿತ್ಸೆ ಬಳಿಕ ನಾಳೆ (ಜುಲೈ 4) ಮಂಗಳವಾರ ಬೆಳಗ್ಗೆ ಡಿಸ್ಚಾರ್ಜ್ ಆಗಲಿದ್ದಾರೆ.
ಸಾಮಾನ್ಯ ತಪಾಸಣೆಯ ಭಾಗವಾಗಿ ಸಿಎಂ ಸ್ಟಾಲಿನ್ ಅವರನ್ನ ತಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.