ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ.
86ರ ಹರೆಯದ ಟಾಟಾ ಅವರು ತಮ್ಮ ವಯೋ ಸಹಜ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾಡಿಕೆಯಂತೆ ವೈದ್ಯಕೀಯ ತನಿಖೆಗೆ ಒಳಗಾಗುತ್ತಿರುವುದಾಗಿ ಅವರು ಸೋಮವಾರ ಹೇಳಿಕೊಂಡಿದ್ದರು.
ಆದರೆ, ಪ್ರಸ್ತುತ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.