BIG NEWS | ಲಂಕನ್ನರ ಮೇಲೆ ಟೀಮ್ ಇಂಡಿಯಾ ಸವಾರಿ: ಸರಣಿ ಕ್ಲೀನ್ ಸ್ವೀಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬ್ಯಾಟಿಂಗ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ (iNDIA) ಬೌಲಿಂಗ್‌ ನಲ್ಲೂ ಶ್ರೀಲಂಕಾದ ಮೇಲೆ ಸವಾರಿ ನಡೆಸಿದ್ದು , ಲಂಕಾ 22 ಓವರ್‌ಗಳಲ್ಲಿ 73 ರನ್‌ಗೆ ಆಲೌಟ್ ಆಗಿದೆ. ಈ ಮೂಲಕ ಭಾರತ 317 ರನ್ ಭರ್ಜರಿ ಗೆಲುವು ದಾಖಲಿಸಿದೆ. ಜೊತೆಗೆ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕೈವಶ ಮಾಡಿದೆ.

ಟೀಮ್ ಇಂಡಿಯಾ ನೀಡಿದ 390 ರನ್ ಗುರಿ ಬೆನ್ನತ್ತಿದ್ದ ಶ್ರೀಲಂಕಾಸಿರಾಜ್ ಹಾಗೂ ಮೊಹಮ್ಮದ್ ಶಮಿ ಮಾರಕ ದಾಳಿಗೆ ವಿಕೆಟ್ ಕಳಚಿತು.

ಆವಿಷ್ಕಾ ಫರ್ನಾಂಡೋ ಕೇವಲ 1 ರನ್ ಸಿಡಿಸಿ ಔಟಾದರು. ಕುಸಾಲ್ ಮೆಂಡೀಸ್ 4 ರನ್ ಗಳಿಸಿ ನಿರ್ಗಮಿಸಿದರು. ಚಾರಿತ್ ಅಸಲಂಕ 1 ರನ್‌ಗೆ ಔಟಾದರು.
19 ರನ್ ಸಿಡಿಸಿದ ನುವಾನಿಂಡು ಫರ್ನಾಂಡೋ ವಿಕೆಟ್ ಪತನಗೊಂಡಿತು. ನಾಯಕ ದಸೂನ್ ಶನಕ ಕೊಂಚ ತಂಡಕ್ಕೆ ರನ್ ಗಳಿಸಲು ಪ್ರಯತ್ನಿಸಿದರೂ ಉಳಿದ ಆಟಗಾರರು ಪೆವಿಯನ್ ನತ್ತ ಪರೇಡ್ ನಡೆಸಿದರು.

ನಾಯಕ ದಸೂನ್ ಶನಕ 11 ರನ್‌ಗೆ ಔಟಾದರು. ಕಸೂನ್ ರಾಜೀತ ಅಜೇಯ 13 ರನ್ ಸಿಡಿಸಿದರೆ, ಅಶೇನ್ ಬಂಡಾರ ಗಾಯಗೊಂಡು ಹೊರನಡೆದರು. ಈ ಮೂಲಕ ಶ್ರೀಲಂಕಾ 22 ಓವರ್‌ಗಳಲ್ಲಿ 73 ರನ್‌ಗೆ ಆಲೌಟ್ ಆಯಿತು. ಭಾರತ 317ರನ್ ಗೆಲುವು ದಾಖಲಿಸಿತು.
ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!