ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ.
ಇದರಿಂದ ಪ್ರಧಾನಿಗಳು ದೆಹಲಿಗೆ ಮರಳುವುದು ವಿಳಂಬವಾಗಲಿದೆ ಎಂದು ವರದಿಯಾಗಿದೆ.
ಜಾರ್ಖಂಡ್‌ನಲ್ಲಿ ರ‍್ಯಾಲಿ ನಡೆಸಲು ಜಾರ್ಖಂಡ್‌ಗೆ ತೆರಳಿದ್ದ ಪ್ರಧಾನಿ ಮೋದಿ, ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ವಾರ್ಷಿಕೋತ್ಸವದ ಪ್ರಯುಕ್ತ ಗೌರವ್ ದಿವಸ್ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಮ್ಮ ಕಾರ್ಯಕ್ರಮ ಮುಗಿಸಿ ದೆಹಲಿಗೆ ಮರಳಲು ಸಿದ್ಧರಾಗಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಸದ್ಯ ತಾಂತ್ರಿಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸಮಸ್ಯೆ ಪರಿಶೀಲಿಸುತ್ತಿವೆ.