BIG NEWS | ಏರ್‌ಪೋರ್ಸ್‌ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ವಾಹನಗಳ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ರಾಷ್ಟ್ರೀಯ ರೈಫಲ್ಸ್ ಘಟಕದ ಸ್ಥಳೀಯ ಘಟಕವು ದಾಳಿಯಾದ ಪ್ರದೇಶವನ್ನು ಸುತ್ತುವರೆದಿದೆ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇನ್ನು ಏರ್‌ಪೋರ್ಸ್‌ ಬೆಂಗಾವಲು ಪಡೆಯನ್ನು ಶಾಸಿತಾರ್ ಬಳಿಯ ವಾಯುನೆಲೆಯೊಳಗೆ ವಾಯುಪಡೆಯ ವಾಹನಗಳನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ.

ಸುರನಕೋಟೆಯ ಸನಾಯಿ ಗ್ರಾಮದಲ್ಲಿ ದಾಳಿ ನಡೆದಿದೆ. ವಿವರಗಳನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸೇನೆ ಮತ್ತು ಪೊಲೀಸರು ಇನ್ನಷ್ಟು ಪಡೆಗಳನ್ನು ದಾಳಿಯಾದ ಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!