Sunday, February 5, 2023

Latest Posts

BIG NEWS | ಪಾಕ್ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾಕರು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪಾಕಿಸ್ತಾನಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ ವಜಿರಿಸ್ತಾನ್ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಲಕಿ ಮಾರ್ವಾಟ್ನಲ್ಲಿರುವ ಬರ್ಗೈ ಪೊಲೀಸ್ ಠಾಣೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರು ಹ್ಯಾಂಡ್ ಗ್ರೆನೇಡ್ಗಳು ಮತ್ತು ರಾಕೆಟ್ ಲಾಂಚರ್ಗಳ ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧ್ಯಕ್ಷ ಆರಿಫ್ ಅಲ್ವಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇನ್ನು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವವರೆಗೂ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ದಾಳಿಯನ್ನು ಖಂಡಿಸಿದರು. ಇನ್ನು ದಾಳಿಯ ಹೊಣೆ ಸದ್ಯಕ್ಕೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!