BIG NEWS | ಪಾಕ್ ನ ಕರಾಚಿಯ ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲೆ ಉಗ್ರರ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನದ (Pakistan) ಕರಾಚಿಯಲ್ಲಿ (Karachi) ಪೊಲೀಸ್ ಮುಖ್ಯಸ್ಥರ ಕಚೇರಿಗೆ (Police Chief’s Office) ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ .

ಕರಾಚಿಯ ಶೇರಿಯಾ ಫೈಸಲ್‍ನಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲೆ 8 ಉಗ್ರರು ದಾಳಿ ನಡೆಸಿದ್ದು, ಪೊಲೀಸರು ಹಾಗೂ ಪಾಕಿಸ್ತಾನ ರೇಂಜರ್‌ಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ.

ದಾಳಿಗೆ 8 ಉಗ್ರರು ಹ್ಯಾಂಡ್ ಗ್ರೆನೇಡ್ ಹಾಗೂ ಬಂದೂಕುಗಳನ್ನು ಬಳಸಿದ್ದಾರೆ. ಘಟನೆ ವೇಳೆ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!